ಅರ್ಜುನನಿಗೆ ಶ್ರೀ ಕೃಷ್ಣ ಉಪದೇಶಗಳು – Sri Krishna Upadesha in Kannada

Here is list of Sri Krishna Upadesha in Kannada – ಅರ್ಜುನನಿಗೆ ಶ್ರೀ ಕೃಷ್ಣ ಉಪದೇಶಗಳು.

Introduction

Sri Krishna, the eighth avatar of Lord Vishnu, is one of the most revered deities in Hinduism. His teachings, as recorded in the Bhagavad Gita, are a source of wisdom and guidance for people across the world. In this article, we will explore Sri Krishna Upadesha in Kannada, and how his lessons can be applied in our lives.

The Life and Legacy of Sri Krishna

Sri Krishna was born in Mathura, and spent his childhood in Vrindavan. He grew up to be a warrior and statesman, and played a key role in the Mahabharata war. Sri Krishna’s teachings, as recorded in the Bhagavad Gita, are considered to be a summary of the Vedas and Upanishads.

ಅರ್ಜುನನಿಗೆ ಶ್ರೀ ಕೃಷ್ಣ ಉಪದೇಶಗಳು

#1. ಶ್ರೀ ಕೃಷ್ಣ ಉಪದೇಶಗಳು

  1. ನಿನ್ನ ಬಗ್ಗೆ ನೀನು ಎಂದೂ ಅತಿಯಾದಂತಹ ಅಹಂಕಾರ ತಾಳಬೇಡ
  2. ಭಗವಂತ ನಮ್ಮ ಬದುಕಿನಲ್ಲಿ ಉಸಿರು ಕೊಟ್ಟು ಬದುಕಿಸುವ ಅಮೃತ. ಆಯಸ್ಸು ಮುಗಿದಾಗ ಉಸಿರು ನಿಲ್ಲಿಸಿ ಕರೆಸಿ ಕೊಳ್ಳುವವನೂ ಅವನೆ.
  3. ದುಷ್ಟರಿಂದ ದೂರವಿರು ಆದರೆ ದ್ವೇಷಿಸಬೇಡ.
  4. ನಿಮ್ಮನ್ನು ಕೋಪದ ಕೈಗೆ ಎಂದೂ ಕೊಡಬೇಡಿ. ಕೋಪಬಂದಾಗ-ಕೋಪ ಇಳಿಯುವ ತನಕ ಮೌನವನ್ನಾಚರಿಸಿದರೆ ಅದರಿಂದಾಗುವ ಅನಾಹುತ ತಪ್ಪುತ್ತದೆ.
  5. ಇನ್ನೊಬ್ಬರಿಗೆ ಕೆಟ್ಟದಾಗಲಿ ಎಂದು ಕನಸಿನಲ್ಲೂ ಬಯಸಬೇಡ.
  6. ಮೋಹದ ಬಲೆಯಲ್ಲಿ ಸಿಕ್ಕಿಕೊಂಡವರು; ಕಾಮದ ತೀಟೆಗಳಲ್ಲಿ ಮೈಮರೆತವರು ಕೊಳಕು ನರಕದಲ್ಲಿ ಬಿದ್ದು ನರಳುತ್ತಾರೆ.
  7. ಕಾಮ-ಕ್ರೋಧ-ಲೋಭ ಎನ್ನುವುದು ನಮ್ಮನ್ನು ಅಧಃಪಾತಕ್ಕೆ ತಳ್ಳುವ ಮೂರು ನರಕದ ಬಾಗಿಲುಗಳು, ಅವುಗಳಿಂದ ದೂರವಿರು.
  8. ಭಗವಂತನ ಪೂಜೆಗೆ ಬೇಕಾಗಿರುವುದು ಧನ-ಕನಕವಲ್ಲ. ಕೇವಲ ನಿಷ್ಕಾಮ ಭಕ್ತಿ.
  9. ಯಾರು ಎಲೆಯನ್ನೋ, ಹೂವನ್ನೋ, ನೀರನ್ನೋ ಭಕ್ತಿಯಿಂದ ನನಗೆ ನೀಡುತ್ತಾನೆ ನನ್ನಲ್ಲೇ ಬಗೆಯಿಟ್ಟ ಅವನ ಭಕ್ತಿಯ ಆ ಕೊಡುಗೆಯನ್ನು ನಾನು ನಲ್ಮೆಯಿಂದ ಕೊಳ್ಳುತ್ತೇನೆ.
  10. ಪೂಜೆಯಲ್ಲಿ ನಿನಗೆ ಬೇಡಲು ಇರುವ ಅಧಿಕಾರ ಕೇವಲ ‘ಮೋಕ್ಷ ಮತ್ತು ಭಗವಂತ’.
  11. ಸ್ಥಿರವಲ್ಲದ, ಸುಖವಿಲ್ಲದ ನರಜನ್ಮ ಬಂದಾಗ ನನ್ನನ್ನು ಆರಾಧಿಸು.
  12. ನಾನು ಪಂಡಿತ’ ಎನ್ನುವ ಅಹಂಕಾರ ತಲೆಗೆ ಬಂದರೆ ಅಂತವನು ಮಹಾ ದರಿದ್ರ ಎನಿಸುತ್ತಾನೆ! ಅಹಂಕಾರದ ಮರಿ ‘ಅಸೂಯೆ’. ಈ ಅಸೂಯೆ ನಮ್ಮನ್ನು ಸುಡುವ ಬೆಂಕಿ.
  13. ನಾಲ್ಕು ಬಗೆಯ ಜನರು ನನ್ನಲ್ಲಿ ಭಕ್ತಿ ಇಡುತ್ತಾರೆ: ಸಂಕಟದಲ್ಲಿರುವವರು, ಸಿರಿಯನ್ನು ಬಯಸುವವರು, ತಿಳಿಯ ಬಯಸುವವನು ಮತ್ತು ತಿಳಿದವನು.
  14. ಯಾರಲ್ಲೂ ಯಾವ ಕ್ರಿಯೆಯೂ ಭಗವಂತನ ಪ್ರೇರಣೆ ಇಲ್ಲದೆ ಆಗುವುದಿಲ್ಲ.
  15. ಪ್ರಪಂಚದಲ್ಲಿ ಅನೇಕ ವಿಧದ ಜನರಿರುತ್ತಾರೆ.
  • ಸುಹೃತರು-ಅಂದರೆ ಒಳ್ಳೆಯ ಹೃದಯ ಉಳ್ಳವರು. ಯಾವ ಪ್ರತ್ಯುಪಕಾರ ಬಯಸದೆ ಎಲ್ಲರಿಗೂ ಸಹಾಯ ಮಾಡುವ ಜನರಿವರು.
  • ಮಿತ್ರ’- ತನ್ನ ಆತ್ಮೀಯನಿಗೆ ಸದಾ ಸಹಾಯ ಮಾಡುವವ, ನಾವು ತಪ್ಪಿದಾಗ ನಮ್ಮನ್ನು ತಿದ್ದುವವನೀತ.
  • ಆರಿಗಳು: ಕೊಲ್ಲುವ ಕೆಟ್ಟ ಶತ್ರುತ್ವ ಸಾಧಿಸುವ ಇವರಿಗೆ ದ್ವೇಷಿಸಲು ಕಾರಣ ಬೇಡ. ಉದಾಸೀನರು: ಇವರು ಒಳ್ಳೆಯದಕ್ಕೂ ಇಲ್ಲ ಕೆಟ್ಟದಕ್ಕೂ ಇಲ್ಲ.
  • ಮಧ್ಯಸ್ಥ: ಒಳ್ಳೆಯದು ಮಾಡಿದಾಗ ಒಳ್ಳೆಯದು, ಕೆಟ್ಟದ್ದು ಮಾಡಿದಾಗ ಕೆಟ್ಟದ್ದು ಮಾಡುವವ.
  • ದ್ವೇಷ್ಯ: ಒಬ್ಬರನ್ನು ಕಂಡು ಸಹಿಸದವ
  • ಕೊನೆಯದಾಗಿ ಬಂಧುಗಳು.

#2. sri krishna upadesha in kannada

  1. ಜೀವಕ್ಕೆ ಮನಸ್ಸೇ ಬಂಧು, ಮನಸ್ಸೇ ಶತ್ರು. ಆದ್ದರಿಂದ ಸಾಧನೆ ಮಾಡಬೇಕಾದರೆ ಮನಸ್ಸನ್ನು ಬಂಧುವಾಗಿ ಪರಿವರ್ತನೆ ಮಾಡಿಕೋ. ಮನಸ್ಸು ನಿನ್ನ ಶತ್ರುವಾಗಿ ನಿಂತರೆ ನಿನ್ನ ಜೀವಮಾನದಲ್ಲೇ ಉದ್ಧಾರವಿಲ್ಲ. ಅದಕ್ಕಾಗಿ ಮೊದಲು ಬುದ್ಧಿಬಲದಿಂದ ಮನಸ್ಸಿಗೆ ತರಬೇತಿ ಕೊಟ್ಟು ಅದನ್ನು ಗೆಲ್ಲಬೇಕು.
  2. ‘ಸುಹೃದಮ್ ಸರ್ವ ಭೂತಾನಾಮ್’. ಭಗವಂತನ ಬಗ್ಗೆ ಎಂದೂ ಭಯಪಡಬೇಕಾಗಿಲ್ಲ. ಆತನಿಗಿಂತ ಆತ್ಮೀಯ ಗೆಳೆಯ ಇನ್ನೊಬ್ಬನಿಲ್ಲ. ನಮ್ಮನ್ನು ಸದಾ ಪ್ರೀತಿಸುವ,ನಿರಂತರ ನಮ್ಮ ಒಳಗೆ-ಹೊರಗೆ ತುಂಬಿ ಸದಾ ರಕ್ಷಿಸುವ ಶಕ್ತಿ. *ಭಗವಂತ.ಪ್ರತಿಯೊಬ್ಬರನ್ನು ಅವರವರ ಯೋಗ್ಯತೆಗೆ ತಕ್ಕಂತೆ ಬೆಳೆಸುವ, ತಪ್ಪು ಮಾಡಿದಾಗ ಕೇವಲ ತಿದ್ದುವುದಕ್ಕೊಸ್ಕರ ಶಿಕ್ಷೆ ಕೊಟ್ಟು ದಾರಿ ತೋರುವ, ಸದಾ ಕಾರುಣ್ಯದಿಂದ ಮೇಲೆತ್ತುವ ‘ಸುಹೃತ್’ ಆ ಭಗವಂತ. ಇಂತಹ ಕರುಣಾಳು ಇನ್ನೊಬ್ಬನಿಲ್ಲ ಎನ್ನುವ ಜ್ಞಾನ ಧ್ಯಾನದಲ್ಲಿ ಬಹಳ ಮುಖ್ಯ. ಈ ವಿಚಾರವನ್ನು ತಿಳಿದು ಅನುಸರಿಸಿದವ ಜ್ಞಾನಾನಂದದ ಪರಾಕಾಷ್ಠೆಯಾದ ಮೋಕ್ಷವನ್ನು ಪಡೆಯುತ್ತಾನೆ ಎನ್ನುತ್ತಾನೆ ಕೃಷ್ಣ.
  3. ಪ್ರತಿಯೊಂದು ಬಾಹ್ಯಸುಖದ ಹಿಂದೆ ದುಃಖವೆಂಬ ಕಗ್ಗತ್ತಲು ಮಡುಗಟ್ಟಿರುತ್ತದೆ. ಬಾಹ್ಯ ಸುಖ-ಆನಂದ ಎನ್ನುವುದು ಕೇವಲ ಒಂದು ಮಿಂಚು.
  4. ನಾನು ಮಾಡಿದ ಪಾಪ ಕರ್ಮದ ಫಲವನ್ನೇ ನಾನು ಅನುಭವಿಸುವುದು.
  5. ನಿನ್ನ ಪಾಲಿಗೆ ಬಂದ ಕರ್ತವ್ಯವನ್ನು ಭಗವಂತನ ಪ್ರಸಾದವೆಂದು ಮಾಡು. ಓಡಿಹೋಗಬೇಡ, ಸಂಸಾರದಲ್ಲಿ ಬದುಕು, ಭಗವಂತ ಕೊಟ್ಟಿದ್ದನ್ನು ಸ್ವೀಕರಿಸು. ನಿನ್ನೆಲ್ಲಾ ಸರ್ವಸ್ವವನ್ನು ‘ಪರಮ ರಕ್ಷಕ ಭಗವಂತ’ ಎಂದು ಅವನಲ್ಲಿ ಅರ್ಪಿಸು. ಹೀಗೆ ಬದುಕುವುದರಿಂದ, ನಮ್ಮ ಆತ್ಮಕ್ಕೆ ಅಂಟಿದ ಕೊಳೆ ತೊಳೆದು ಹೋಗುತ್ತದೆ, ಮನಸ್ಸು ಸ್ವಚ್ಛವಾಗುತ್ತದೆ. ಆಗ ಜ್ಞಾನ ಬೆಳಗುತ್ತದೆ-ಭಗವಂತನ ಸಾಕ್ಷಾತ್ಕಾರವಾಗುತ್ತದೆ. ಇದರಿಂದ ಮತ್ತೆ ಮರಳಿ ಬಾರದ ಶಾಶ್ವತ ಮೋಕ್ಷವನ್ನು ಜೀವ ಪಡೆಯಬಲ್ಲ.
  6. ಯಾರ ಪಾಪವನ್ನು ನೀನು ತೆಗೆದುಕೊಳ್ಳಲು ಬರುವುದಿಲ್ಲ ಹಾಗು ಇನ್ನೊಬ್ಬರ ಪುಣ್ಯ ನಮಗೆ ಬರುವುದಿಲ್ಲ; ನಾವು ಏನು ಅನುಭವಿಸುತ್ತೇವೆ ಅದು ನಾವು ಮಾಡಿದ ಕರ್ಮ ಫಲ.
  7. ದೇವರು ನಮಗೆ ಶಿಕ್ಷೆ ಕೊಡುವುದು ದ್ವೇಷದಿಂದಲ್ಲ, ಅದರ ಹಿಂದಿರುವುದು ಅಪಾರ-ಅನಂತವಾದ ಕಾರುಣ್ಯ.
  8. ಅಹಂಕಾರ ಇದ್ದು ವೇದಾಂತ ಓದಿದರೆ ಏನೂ ಉಪಯೋಗವಿಲ್ಲ.
  9. ನಮ್ಮ ಅತಿ ದೊಡ್ಡ ಸಂಪತ್ತು ಎಂದರೆ ಪ್ರಸನ್ನವಾದ ಸ್ವಚ್ಛ ಮನಸ್ಸು. ಅಂತಹ ಮನಸ್ಸಿನಲ್ಲಿ ಭಗವಂತ ಕಾಣಿಸಿಕೊಳ್ಳುತ್ತಾನೆ.
  10. ಶಾಶ್ವತವಾದ ಆನಂದವನ್ನು ಪಡೆಯುವುದಕ್ಕೋಸ್ಕರ ನನ್ನನ್ನು ಆಶ್ರಯಿಸು. ನನಗೆ ಶರಣಾಗು. ನಿನ್ನನ್ನು ಉದ್ಧಾರ ಮಾಡುವ ಹೊಣೆ ನನ್ನದು.
  11. ನಿಜವಾದ ಭಕ್ತರಿಗೆ ಭಗವಂತ ವಶನಾಗುತ್ತಾನೆ.
  12. ನಿಜವಾದ ಭಕ್ತರು ಸಾಮಾನ್ಯವಾಗಿ ಎಂದೂ ದುರಾಚಾರಿಗಳಾಗಿರುವುದಿಲ್ಲ.

#3. ಭಗವಾನ್ ಶ್ರೀ ಕೃಷ್ಣನ ಉಪದೇಶಗಳು

  1. ಭಗವಂತ ಒದಗಿಸಿಕೊಟ್ಟಿದ್ದನ್ನು ಭಗವದ್ ಪ್ರಸಾದವೆಂದು ಸ್ವೀಕರಿಸು, ಸಂತೋಷವಾಗಿ ಅದನ್ನು ಭೋಗಿಸು-ಅನುಭವಿಸು, ಇಲ್ಲದ್ದನ್ನು ಬೇಕು ಎಂದು ಬಯಸಿ ಕೊರಗಬೇಡ” .
  2. ನಿನಗೆ ಏನು ಬೇಕು ಎನ್ನುವುದು ಭಗವಂತನಿಗೆ ಗೊತ್ತಿದೆ, ಅದನ್ನು ಭಗವಂತನಿಗೆ ಬಿಡು. ಕೇವಲ ಭಗವತ್ ಪ್ರೀತಿಗಾಗಿ, ಮೋಕ್ಷ ಸಾಧನೆಗಾಗಿ ಕರ್ಮ ಮಾಡು”
  3. ನನಗಾಗಿ ನೀನು ಏನನ್ನೂ ಮಾಡುವುದು ಬೇಡ. ಆದರೆ ನಿನಗೋಸ್ಕರ ಏನು ಮಾಡುತ್ತೀಯೋ ಅದನ್ನು ನನಗೆ ಅರ್ಪಿಸು.
  4. ಮನಸ್ಸಿನಲ್ಲಿ ಭಕ್ತಿ ತುಂಬಿ ತುಳಸಿ ಪತ್ರೆಯನ್ನೋ, ಹೂವನ್ನೋ ಅರ್ಪಿಸಿದರೆ ಅದನ್ನು ಭಗವಂತ ಪ್ರೀತಿಯಿಂದ ಸ್ವೀಕರಿಸುತ್ತಾನೆ. ಇಲ್ಲಿ ಬಂಗಾರದ ಪೀಠವಾಗಲೀ, ಬೆಳ್ಳಿಯ ಹರಿವಾಣವಾಗಲಿ, ಪಂಚಪಾತ್ರೆಯಾಗಲಿ ಏನೂ ಬೇಡ. ಮನೆಯಲ್ಲಿ, ಮನೆ ತೋಟದಲ್ಲಿ ಏನಿದೆ ಅದನ್ನೇ ಅರ್ಪಿಸು.
  5. ಮನೆಯಲ್ಲಿ ಹಾಲಿಲ್ಲದಿದ್ದರೆ ಒಂದು ಲೋಟ ನೀರನ್ನು ಭಕ್ತಿಯಿಂದ ಅರ್ಪಿಸು. ಆದರೆ ಅದರ ಹಿಂದೆ ಭಾವ ಶುದ್ಧಿ ಇರಲಿ ಅಷ್ಟೇ. ಭಗವಂತ ಬಯಸುವುದು ನಮ್ಮ ಅಂತರಂಗದ ಪ್ರೀತಿಯನ್ನು ಮತ್ತು ಹೃದಯವಂತಿಕೆಯನ್ನು ಹೊರತು ಹೊರಗಿನ ವೈಭವವನ್ನಲ್ಲ.
  6. ನಿನ್ನ ಜೀವನದಲ್ಲಿ ಏನು ನಡೆಯುತ್ತಿದೆ ಅದು ಆಕಸ್ಮಿಕವಲ್ಲ. ಅದು ಭಗವಂತನ ಇಚ್ಛೆ,
  7. ನಮಗೆ ಬುದ್ಧಿ, ಜ್ಞಾನ, ಅಸಮ್ಮೋಹ, ಕ್ಷಮಾ, ಸತ್ಯಂ, ದಮಃ-ಶಮಃ -ಎಲ್ಲವನ್ನು ಕೊಡುವವನು ಆ ಭಗವಂತ.
  8. ಇಂದ್ರಿಯ ನಿಗ್ರಹಕ್ಕೆ ಇರುವ ಏಕಮಾತ್ರ ಮಾರ್ಗ ಭಗವಂತನಲ್ಲಿ ಶರಣಾಗತಿ.
  9. ಒಬ್ಬರು ನಮ್ಮನ್ನು ದ್ವೇಷಿಸಿದಾಗ ಕುಗ್ಗುವ ಅಗತ್ಯವಾಗಲೀ, ಒಬ್ಬರು ನಮ್ಮನ್ನು ಪ್ರೀತಿಸಿದಾಗ ಹಿಗ್ಗುವ ಅಗತ್ಯವಾಗಲೀ ಇಲ್ಲ. ಎಲ್ಲವೂ ನಮ್ಮಜೀವಸ್ವಭಾವ ಮತ್ತು ಪ್ರಾರಬ್ಧ ಕರ್ಮಕ್ಕನುಗುಣವಾಗಿ ಭಗವಂತನ ಲೀಲೆ ಎನ್ನುವ ಎಚ್ಚರ ಇಲ್ಲಿ ಬಹಳ ಮುಖ್ಯ.
  10. ನಾವು ಸೋಲಿನಲ್ಲಿ ಕಲಿತಷ್ಟು ಗೆಲುವಿನಲ್ಲಿ ಕಲಿಯಲಾಗದು.
  11. ಯಾರು ಇನ್ನೊಬ್ಬರ ನೋವನ್ನು ತನ್ನ ನೋವಿನಷ್ಟೇ ನೋವಿನಿಂದ ಕಾಣುತ್ತಾನೋ, ಯಾರು ಇನ್ನೊಬ್ಬರ ಸಂತೋಷವನ್ನು- ಯಶಸ್ಸನ್ನು ತನ್ನ
  12. ಯಶಸ್ಸೆಂದು ತಿಳಿದು ಖುಷಿ ಪಡುತ್ತಾನೋ- ಅವನು ಬಹಳ ದೊಡ್ಡ ಯೋಗ ಸಾಧಕ.

#4. ಭಗವಾನ್ ಶ್ರೀ ಕೃಷ್ಣ ಸಂದೇಶಗಳು

    1. ಮನಸ್ಸನ್ನು ಜಾರಲು ಬಿಡಬೇಡ, ಎಲ್ಲ ಸಂಕಲ್ಪವನ್ನು ತ್ಯಾಗ ಮಾಡಿ ಭಗವಂತ ಒದಗಿಸಿಕೊಟ್ಟಿದ್ದನ್ನು ಭಗವದ್ ಪ್ರಸಾದವೆಂದು ಸ್ವೀಕರಿಸು, ಸಂತೋಷವಾಗಿ ಅದನ್ನು ಭೋಗಿಸು-ಅನುಭವಿಸು, ಇಲ್ಲದ್ದನ್ನು ಬೇಕು ಎಂದು ಬಯಸಿ ಕೊರಗಬೇಡ .
    2. ನಾವೆಲ್ಲರೂ ಕೂಡಾ ಭಗವಂತ ಸೃಷ್ಟಿ ಮಾಡಿದ ಗೊಂಬೆಗಳು-ಆತ ಸೂತ್ರದಾರ. ನಮ್ಮ ಕ್ರಿಯೆ ಆ ಸೂತ್ರದಾರನ ನಿಯಮಕ್ಕೆ ಬದ್ಧ.
    3. ಯಾರನ್ನಾದರು ಟೀಕೆ ಮಾಡಲು ನಾವು ಅರ್ಹರಲ್ಲ. ಏಕೆಂದರೆ ನಮಗೆ ಅಂತರಂಗ ದರ್ಶನವಿಲ್ಲ. ನಾವು ಮಾತನಾಡುವುದು ಕೇವಲ ಹೊರ ನೋಟದಿಂದ. ಒಳಗೆ ಯಾರು ಏನು ಎಂದು ನೋಡುವ ಶಕ್ತಿ ನಮಗಿಲ್ಲ.
    4. ರಾಗ ದ್ವೇಷಾದಿಗಳು ನಮ್ಮ ಪರಮ ಶತ್ರುಗಳು. ನಾವು ನಮ್ಮ ಜೀವನದ ಸರ್ವ ಸಮಸ್ಯೆಗಳಿಗೆ ಕಾರಣವಾದ ಒಲವು(ಆಸೆ,ರಾಗ ಅಂಜಿಕೆ (ಭಯ) ಮತ್ತು ಕೋಪ(ಸಿಟ್ಟು)ವನ್ನು ತೊರೆದು, ಏನು ಇದೆಯೋ ಅದರಲ್ಲಿ ಸಂತೋಷಪಡುವುದನ್ನು ಮತ್ತು ಏನು ಬಂತೋ ಅದನ್ನು ಸಂತೋಷದಿಂದ ಸ್ವೀಕರಿಸುವ ಮನೋವೃತ್ತಿಯನ್ನು ಬೆಳೆಸಿಕೊಂಡು, ಮನ್ಮಯರಾಗಬೇಕು.
    5. ನಿನಗೆ ಏನು ಬೇಕು ಎನ್ನುವುದು ಭಗವಂತನಿಗೆ ಗೊತ್ತಿದೆ, ಅದನ್ನು ಭಗವಂತನಿಗೆ ಬಿಡು. ಕೇವಲ ಭಗವತ್ ಪ್ರೀತಿಗಾಗಿ, ಮೋಕ್ಷ ಸಾಧನೆಗಾಗಿ ಕರ್ಮ ಮಾಡು”
    6. ನನಗಾಗಿ ನೀನು ಏನನ್ನೂ ಮಾಡುವುದು ಬೇಡ. ಆದರೆ ನಿನಗೋಸ್ಕರ ಏನು ಮಾಡುತ್ತೀಯೋ ಅದನ್ನು ನನಗೆ ಅರ್ಪಿಸು.
    7. ಮನಸ್ಸಿನಲ್ಲಿ ಭಕ್ತಿ ತುಂಬಿ ತುಳಸಿ ಪತ್ರೆಯನ್ನೋ, ಹೂವನ್ನೋ ಅರ್ಪಿಸಿದರೆ ಅದನ್ನು ಭಗವಂತ ಪ್ರೀತಿಯಿಂದ ಸ್ವೀಕರಿಸುತ್ತಾನೆ. ಇಲ್ಲಿ ಬಂಗಾರದ ಪೀಠವಾಗಲೀ, ಬೆಳ್ಳಿಯ ಹರಿವಾಣವಾಗಲಿ, ಪಂಚಪಾತ್ರೆಯಾಗಲಿ ಏನೂ ಬೇಡ. ಮನೆಯಲ್ಲಿ, ಮನೆ ತೋಟದಲ್ಲಿ ಏನಿದೆ ಅದನ್ನೇ ಅರ್ಪಿಸು.
    8. ಮನೆಯಲ್ಲಿ ಹಾಲಿಲ್ಲದಿದ್ದರೆ ಒಂದು ಲೋಟ ನೀರನ್ನು ಭಕ್ತಿಯಿಂದ ಅರ್ಪಿಸು. ಆದರೆ ಅದರ ಹಿಂದೆ ಭಾವ ಶುದ್ಧಿ ಇರಲಿ ಅಷ್ಟೇ. ಭಗವಂತ ಬಯಸುವುದು ನಮ್ಮ ಅಂತರಂಗದ ಪ್ರೀತಿಯನ್ನು ಮತ್ತು ಹೃದಯವಂತಿಕೆಯನ್ನು ಹೊರತು ಹೊರಗಿನ ವೈಭವವನ್ನಲ್ಲ.
    9. ನಮಗೆ ಬುದ್ಧಿ, ಜ್ಞಾನ, ಅಸಮ್ಮೋಹ, ಕ್ಷಮಾ, ಸತ್ಯಂ, ದಮಃ-ಶಮಃ -ಎಲ್ಲವನ್ನು ಕೊಡುವವನು ಆ ಭಗವಂತ.
    10. ತಿಳಿದವರು ‘ನಾನು ಎಲ್ಲದರ ಕಾರಣ, ನನ್ನಿಂದಲೆ ಎಲ್ಲವೂ ನಡೆಯುತ್ತಿದೆ’ ಎಂದರಿತು ಭಕ್ತಿಯಿಂದ ನನ್ನನ್ನು ಸೇವಿಸುತ್ತಾರೆ.
    11. ಬಡತನವಾಗಲಿ,ಸಿರಿತನವಾಗಲಿ, ನಾವು ಹುಟ್ಟುವ ಮನೆಯಾಗಲಿ ಯಾವುದು ನಮ್ಮ ಕೈಯಲಿಲ್ಲ. ಎಲ್ಲವೂ ಈಶ್ವರನ ಚಿತ್ತ. ಇದನ್ನು ತಿಳಿದು ಬದುಕುವುದು ಯತಚಿತ್ತಾತ್ಮನ ಗುರುತು. ಸ್ವಬಾವ ಮತ್ತು ಪ್ರಬಾವದ ಸಮ್ಮಿಶ್ರಣ ಈ ಬದುಕು.
    12. ನಿನ್ನ ಜೀವನದಲ್ಲಿ ಹೀಗೇ ಆಗಬೇಕು, ಹೀಗೇ ಮಾಡಬೇಕು, ಅದರಿಂದ ಇಂತದ್ದು ನನಗೆ ಸಿಗಬೇಕು ಅನ್ನುವ ಬಯಕೆ, ಆಸೆಗಳನ್ನು ಬಿಟ್ಟು ನಿರಾಳವಾಗಿ ಕರ್ತವ್ಯ ಮಾಡು. ಭಗವಂತ ಏನು ಕೊಟ್ಟ ಅದನ್ನು ಪ್ರಸಾದವಾಗಿ ಸ್ವೀಕರಿಸು. ಏನು ಬಂತೋ ಅದರಲ್ಲಿ ತೃಪ್ತಿಪಡುವುದನ್ನು ಕಲಿ. ಇಲ್ಲವಲ್ಲಾ ಎಂದು ಸಂಕಟ ಪಡಬೇಡ. ಇದು ‘ಕಾಮಸಂಕಲ್ಪವರ್ಜ್ಯ’.
    13. ಲೌಕಿಕ ಆಸೆ ಇದ್ದಾಗ ಅತೃಪ್ತಿ ತಪ್ಪಿದ್ದಲ್ಲ. ಇಲ್ಲದ್ದನ್ನು ಬಯಸಿ ಎಂದೂ ಸುಖ ಸಿಗುವುದಿಲ್ಲ.ತೃಪ್ತಿ ಇರಬೇಕಾದರೆ ಬೇಕು ಬೇಡಗಳ ಪಟ್ಟಿಯನ್ನು ಕಡಿಮೆ ಮಾಡಬೇಕು.
    14. ಭಗವಂತನ ಸ್ಮರಣೆಗೆ ಯಾವುದೇ ಕಾಲದ ನಿರ್ಬಂಧವಿಲ್ಲ. ಯಾವಾಗ ಭಗವಂತನ ಸ್ಮರಣೆ ಬಂತೋ ಅದೇ ಪುಣ್ಯಕಾಲ. ಭಗವಂತನ ಸ್ಮರಣೆ ಮನಸ್ಸಿನಲ್ಲಿರುವುದೇ ಮಡಿ.
    15. ಫಲದ ಬಗ್ಗೆ ಅತಿಯಾದ ಆಸೆ ಇಟ್ಟುಕೊಳ್ಳಬೇಡ; ಅತಿಯಾದ ನಿರೀಕ್ಷೆ ಬೇಡ; ಕರ್ತವ್ಯ ನಿಷ್ಠೆ ಇರಲಿ; ದೇಹಾಭಿಮಾನ, ಪರಿವಾರದ ಅಭಿಮಾನವನ್ನು ತೊರೆದು ನಿರ್ಲಿಪ್ತನಾಗಿ ಬದುಕಲು ಕಲಿ; ಮನಸ್ಸನ್ನು ಜ್ಞಾನಸ್ವರೂಪನಾದ ಭಗವಂತ(ಚೇತಸ್ಸು)ನಲ್ಲಿ ನೆಲೆಗೊಳಿಸು. ಹೀಗೆ ಬದುಕಿದಾಗ ನಾವು ಮಾಡುವ ಕರ್ಮವೆಲ್ಲವೂ ಯಜ್ಞವಾಗಿ ಯಜ್ಞ ನಾಮಕ ಭಗವಂತನನ್ನು ಸೇರುತ್ತದೆ ಹಾಗು ಜ್ಞಾನದ ಬೆಂಕಿಯಲ್ಲಿ ಕರ್ಮದ ಕೊಳೆ ಸುಟ್ಟುಹೋಗುತ್ತದೆ.

    Read More Krishna Quotes in Kannada here

    Conclusion

    Sri Krishna’s teachings in the Bhagavad Gita are a source of inspiration and guidance for people across the world. By studying Sri Krishna Upadesha in Kannada, we can gain a deeper understanding of his teachings and apply them in our daily lives to attain spiritual growth and fulfillment.

    FAQs

    1. What is the significance of Sri Krishna in Hinduism?
      • Sri Krishna is considered to be one of the most important deities in Hinduism. He is revered as the eighth avatar of Lord Vishnu and his teachings in the Bhagavad Gita are a source of wisdom and guidance for people across the world.
    2. What is Karma Yoga ?
      • Sri Krishna emphasized the importance of performing actions without attachment to the results. This principle, known as Karma Yoga, is one of the central teachings of the Bhagavad Gita. Sri Krishna taught Arjuna that performing one’s duty is more important than the outcome of the action.
    3. What is Jnana Yoga?
      • Sri Krishna also taught the path of knowledge, or Jnana Yoga. He emphasized the need for self-realization and the attainment of spiritual wisdom. Sri Krishna explained that the ultimate goal of life is to realize the oneness of the individual self and the universal self.
    4. . What is Bhakti Yoga ?
      • Sri Krishna’s teachings also emphasized the path of devotion, or Bhakti Yoga. He taught that the highest form of devotion is to love God with all one’s heart, and to surrender one’s ego to him. Sri Krishna’s teachings on Bhakti Yoga emphasize the importance of developing a personal relationship with the divine.
    5. What is Dharma?
      • Another key teaching of Sri Krishna is the principle of Dharma. Dharma refers to one’s duty and righteousness, and Sri Krishna taught that it is important to follow one’s Dharma in life. He also emphasized that one’s Dharma may change depending on their stage of life and their responsibilities.
    6. What is Moksha?
      • The ultimate goal of Sri Krishna’s teachings is the attainment of Moksha, or liberation from the cycle of birth and death. He taught that Moksha can be attained through the practice of Karma, Jnana, and Bhakti Yoga.